ಲಿಂಗಸುಗೂರು : ದೇಶಾದ್ಯಂತ 79ನೇ ಸ್ವತಂತ್ರ ದಿನೋತ್ಸವ ಸಂಭ್ರಮದ ಆಚರಣೆಯಲ್ಲಿ
ಇಂದು ಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವ ಆಚರಣೆ, ಪೊಲೀಸ್ ಇನ್ಸ್ಪೆಕ್ಟರ್ ಹೊಸಕೇರಪ್ಪ ಕೆ ಮಹಾತ್ಮ ಗಾಂಧೀಜಿ ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹೂವಿನರ ಹಾಕುವ ಮೂಲಕ ಪೂಜೆ ಸಲ್ಲಿಸಿದರು.
ನಂತರ 79ನೇ ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣ ನೆರವೇರಿಸಿದರು, ಪೊಲೀಸ್ ರಿಂದ ಗೌರವ ವಂದನೆ ಸ್ವೀಕರಿಸಿದ ನಂತರ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ಸ್ವಾತಂತ್ರ ತಂದುಕೊಟ್ಟ ದೇಶಭಕ್ತರನ್ನು ಮರೆಯಬಾರದು, ಸ್ವಾತಂತ್ರ್ಯಕ್ಕಾಗಿ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅದಕ್ಕಾಗಿ ಹೋರಾಟಗಾರರನ್ನು ಸ್ಮರಿಸ ಬೇಕು ಎಂದರು.
ಮತ್ತು ಹಟ್ಟಿ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದ್ದು ಅಭಿಪ್ರಾಯ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಪಿ ಎಸ್ ಐ ಧರ್ಮಣ್ಣ, ಎ ಎಸ್ ಐ, ಪೋಲಿ ಸಿಬ್ಬಂದಿಗಳು ಉಪಸ್ಥಿತರಿದ್ದರು.




