Ad imageAd image
- Advertisement -  - Advertisement -  - Advertisement - 

ಟಿಪ್ಪರ್ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಸಾವು : ಹೊಟ್ಟೆಯಿಂದ ಹೊರ ಬಂದ ಮಗು 

Bharath Vaibhav
ಟಿಪ್ಪರ್ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಸಾವು : ಹೊಟ್ಟೆಯಿಂದ ಹೊರ ಬಂದ ಮಗು 
ACCIDENT
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ.ಟಿಪ್ಪರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ.

ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದ್ದು, ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!