ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಹಂದಿಗುಂದ ಗ್ರಾಮ ಸುತ್ತಮುತ್ತಲಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಈ ಸಮಸ್ಯೆ ಗಳ ಆಲಿಸಿದ ಸಚಿವರು, ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಫೋನ್ ಕರೆ ಮೂಲಕ ತಿಳಿಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕುರುಬ ಸಮುದಾಯದವರು ಬ್ರಿಟಿಷರ ವಿರುದ್ಧ ಹೋರಾಡಿ ಜೀವತೆತ್ತ ಸ್ವಾತಂತ್ರ್ಯ ಹೋರಾಟಗಾರ, ‘ಕ್ರಾಂತಿವೀರ’ ಸಂಗೊಳ್ಳಿ ರಾಯಣ್ಣನ ಭಾವಚಿತ್ರವಿರುವ ಪೋಟೋ ಕೊಟ್ಟು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಶಾಮ್ ಘಾಟಗೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಹಂದಿಗುಂದ ಗ್ರಾಮದ ಮುಖಂಡರು ಇದ್ದರು.
ಪ್ರತೀಕ್ ಚಿಟಗಿ