ಬೆಂಗಳೂರು : ‘ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣ ‘ಸಿಸಿಬಿ’ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ‘ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ‘ಸಿಸಿಬಿ’ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಘಟನೆ ಸಂಬಂಧ ತನಿಖಾಧಿಕಾರಿಯಾಗಿ ಎಸ್‌ಐ ನವೀನ್ ಕುಲಕರ್ಣಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಎ ಎಲ್ ಪೊಲೀಸ್ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಿ ಕಮಿಷನರ್ ದಯಾನಂದ್ ಆದೇಶಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ನಡೆದ ಹಿನ್ನೆಲೆ ಬೆಂಗಳೂರು ಸುತ್ತಾಮುತ್ತಾ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ತಂಡ ಶುಕ್ರವಾರ ತನಿಖೆ ನಡೆಸಿತು.
ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ. ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಇದೀಗ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.