ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆದಿದ್ದು, ಇಂದೇ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು.
ಬಿಜೆಪಿ-ಜೆಡಿಎಸ್ ಈಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ 25 ಸ್ಥಾನಗಳಲ್ಲಿ ಗುಲುವು ಸಾಧಿಸಲಿದ್ದೇವೆ ಎಂದರು. ಈ ತಿಂಗಳು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಸಭೆಗಳಿಗೆ ಹೆಚ್ಚಿನ ಜನರನ್ನು ಸೇರಿಸಬೇಕಿದೆ ಎಂದರು.