ಮೈಸೂರು : ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಹಿನ್ನೆಲೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಸುದ್ದಿ ಹರಡಿಸಲಾಗುತ್ತಿದೆ, ಯಾವುದೇ ಕಾರಣಕ್ಕೂ ಬಡವರ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ ಅಥವಾ ಕಿತ್ತುಕೊಳ್ಳುವುದಕ್ಕೋ? ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದರೂ ನಯಾಪೈಸೆ ಕೊಟ್ಟಿಲ್ಲ ಎಂದು ಕಿಡಿಕಾರಿದರು.