Ad imageAd image

ಯುಗಾದಿ ಹಬ್ಬದ ಮಹತ್ವವೇನು..? : ಆಚರಣೆ ಹೇಗೆ..?!

Bharath Vaibhav
ಯುಗಾದಿ ಹಬ್ಬದ ಮಹತ್ವವೇನು..? : ಆಚರಣೆ ಹೇಗೆ..?!
WhatsApp Group Join Now
Telegram Group Join Now

ಯುಗಾದಿ ಹಬ್ಬವನ್ನು ದೇಶದ ವಿವಿಧ ಭಾಗದಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ.

ಈ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ, ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್ವ.ಹಬ್ಬಗಳ ಹೆಸರು ಬೇರೆ ಬೇರೆ ಆದರೂ ಎಲ್ಲೆಡೆ ಅದರ ಮಹತ್ವ ಏಲ್ಲಾ ಕಡೆ ಒಂದೇ.

ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು.
ಯುಗಾದಿ ದಿನದಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.

ಈ ದಿನ ತಳಿರು ತೋರಣವನ್ನು ಅಂದರೆ ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲುಗಳಿಂದ ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ಕಟ್ಟುವರು. ಆ ಮೂಲಕ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸುತ್ತಾರೆ.

ಇವೆಲ್ಲವುಗಳ ಜೊತೆಗೆ ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು.

ಮುಂಜಾನೆ ಬೇಗನೆದ್ದು ಅಭ್ಯಂಜನ ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಬೇವು ಬೆಲ್ಲ, ಸಿಹಿ ತಿನಿಸು ಹಾಗೂ ಭೂರಿ ಭೋಜನ ಮಾಡಿ ಸಂಭ್ರಮಿಸುವರು.

ಈ ದಿನ ಹೆಚ್ಚಿನ ಮನೆಗಳಲ್ಲಿ ಪಂಚಾಂಗ ಓದಲಾಗುತ್ತದೆ. ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಇದನ್ನು ಮುಖ್ಯವಾಗಿ ಹಿಂದೂ ಸಂಪ್ರದಾಯದ ಹೊಅ ವರ್ಷದಲ್ಲಿ ಓದುವುದು ಶುಭ ಎಂದು ಹೇಳಲಾಗುತ್ತದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!