ಬೆಂಗಳೂರು : ಕರುನಾಡ ಕುರುಕ್ಷೇತ್ರಕ್ಕೆ ಟಾಲಿವುಡ್ ನಟ ಪವನ್ ಕಲ್ಯಾಣ್ ಎಂಟ್ರಿ ಕೊಡಲಿದ್ದು, ಏ.17 ರಂದು ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಜನಸೇನಾ ಅಧ್ಯಕ್ಷ ನಟ ಪವನ್ ಕಲ್ಯಾಣ್ ಭರ್ಜರಿ ಪ್ರಚಾರ ನಡೆಸಲಿದ್ದು, ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಲಿದ್ದಾರೆ.ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ವಿವಿಧ ಪಕ್ಷಗಳ ಕಸರತ್ತು ಜೋರಾಗಿದೆ.
ಏ.14 ರಂದು ಮಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ ಭರ್ಜರಿ ನಡೆಸಲಿದ್ದಾರೆ.ಏಪ್ರಿಲ್ 15 ರಿಂದ 17 ರವರೆಗೆ ಪಕ್ಷದ ರಾಜ್ಯ ಅಧ್ಯಕ್ಷರು ಮತ್ತು ಶಾಸಕರು ಮತ್ತು ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ಪ್ರಮುಖ ನಾಯಕರು ಮನೆ ಮನೆ ಪ್ರಚಾರದ ಭಾಗವಾಗಿ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಇದು ನಡೆಯಲಿದೆ.