ಮೈಸೂರು : ಮೈಸೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಪ್ರಧಾನಿ ಮೋದಿ ರಾಜ್ಯ ಸರ್ಕಾರದ ವಿರುದ್ಧ ಕಪ್ಪುಹಣದ ಗಂಭೀರ ಆರೋಪ ಮಾಡಿದ್ದಾರೆ. ದೇಶದಾದ್ಯಂತ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕರ್ನಾಟಕ ಕಾಂಗ್ರೆಸ್ ನಿಂದ ನೂರಾರು ಕೋಟಿ ಕಪ್ಪು ಹಣ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ಕರ್ನಾಟಕ ದೇಶದ ಐಟಿ & ಟೆಕ್ನಾಲಜಿ ಹಬ್ ಆಗಿದೆ. ಇಲ್ಲಿನ ಯುವಕರಿಗೆ ಇದರ ಹೆಚ್ಚಿನ ಲಾಭ ಸಿಗಬೇಕು. ನಾವು ಸಂಕಲ್ಪ ಪತ್ರದಲ್ಲಿ ಸ್ಥಳೀಯ ಭಾಷೆಗಳ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದೇವೆ.
ಕನ್ನಡ ದೇಶದ ಸಮೃದ್ಧ ಭಾಷೆ. ಬಿಜೆಪಿಯ ಈ ಮಿಷನ್‌ನಿಂದ ಕನ್ನಡದ ವಿಸ್ತಾರವಾಗುತ್ತದೆ ಹಾಗೂ ಹೆಚ್ಚಿನ ಮಾನ್ಯತೆ ಸಿಗುತ್ತದೆ. ಮೈಸೂರು, ಹಂಪಿ ಬಾದಾಮಿ ರೀತಿಯ ಹೆರಿಟೇಜ್ ಸೈಟ್‌ಗಳನ್ನು ವಿಶ್ವ ಟೂರಿಸಂ ಭೂಪಟದಲ್ಲಿ ಪ್ರಮೋಟ್ ಮಾಡಲಿದ್ದೇನೆ ಎಂದರು.
ಕರ್ನಾಟಕದಲ್ಲಿ ಟೂರಿಂಸಂ ಹಾಗೂ ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಇವೆಲ್ಲವೂ ಜಾರಿಯಾಗಲು ಬಿಜೆಪಿ ಅಗತ್ಯವಿದೆ. ಎನ್‌ಡಿಎ ಅಗತ್ಯದೆ.
ಎನ್‌ಡಿಎ ಏನು ಹೇಳುತ್ತೋ ಅದನ್ನು ಮಾಡುತ್ತದೆ. 370ನೇ ವಿಧಿ, ತ್ರಿವಳಿ ತಲಾಕ್, ರಾಮ ಮಂದಿರವೇ ಆಗಲಿ ಬಿಜೆಪಿಯ ಸಂಕಲ್ಪವೇ ಮೋದಿಯ ಗ್ಯಾರಂಟಿ. ಮೋದಿಯ ಗ್ಯಾರಂಟಿಗೆ ಹೆಚ್ಚಿನ ಬಲ ನಿಮ್ಮ ಒಂದು ವೋಟ್‌ನಿಂದ ಸಿಗುತ್ತದೆ. ನಿಮ್ಮ ಒಂದು ಮತ, ನನ್ನ ಬಲವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಹೇಳಿದರು.