ಬೆಳಗಾವಿ :-ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರು ಸೋಮವಾರ(ಏ.15) ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಮತ್ತು ನಂತರ ನಡೆದ ಮೆರವಣಿಗೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಪ್ರಕಾಶ ಹುಕ್ಕೇರಿ, ಲಕ್ಷ್ಮಣ ಸವದಿ, ಅಶೋಕ ಪಟ್ಟಣ, ವಿಶ್ವಾಸ ವೈದ್ಯ, ರಾಜು ಸೇಠ್, ರಾಜು ಕಾಗೆ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬಾಗಣ್ಣ ನರೋಟಿ, ಮಹಾಂತೇಶ ಕಡಾಡಿ ಮೊದಲಾದವರು ಭಾಗವಹಿಸಿದ್ದರು.
ವರದಿ ಪ್ರತೀಕ ಚಿಟಗಿ