ಬೆಂಗಳೂರು: ರಾಜ್ಯ ಸರ್ಕಾರದಿಂದ 500ಕ್ಕೂ ಹೆಚ್ಚು ಕೆಎಎಸ್ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಇದೀಗ ಕೆಪಿಎಸ್ಸಿಯಿಂದ 384 KAS ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ರ ಇಂದು ಕೊನೆಯ ದಿನವಾಗಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗ್ರೂಪ್-ಎ 159 ಹಾಗೂ ಗ್ರೂಪ್-ಬಿಯ 225 ಸೇರಿದಂತೆ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿರೋದಾಗಿ ತಿಳಿಸಿದೆ.
ಕೆಎಎಸ್ ಹುದ್ದೆಗಳ ( KAS Recruitment ) ಭರ್ತಿಗೆ ದಿನಾಂಕ 04-03-2024ರಿಂದ http://kpsc.kar.nic.in ಜಾಲತಾಣದಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರುವಾಗಿದ್ದು, ದಿನಾಂಕ 15-04-2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಂತ ಹೇಳಿದೆ.
ಹೊಸದಾಗಿ ಅರ್ಜಿ ಸಲ್ಲಿಸುವವರು https://kpsconline.karnataka.gov.in ಗೆ ಭೇಟಿ ನೀಡಿ, ನೋಂದಾಯಿಸಿಕೊಳ್ಳಬೇಕು. ಆ ನಂತ್ರ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬೇಕು ಅಂತ ತಿಳಿಸಿದೆ.
ಅಂದಹಾಗೇ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 5 ಬಾರಿ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 7 ಬಾರಿ. ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಪ್ರಯತ್ನಗಳ ಯಾವುದೇ ಮಿತಿ ಇರುವುದಿಲ್ಲ.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.