ಖಾನಾಪುರ:- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗು ತುಂಬಾನೇ ರಂಗೇರಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಮುಖಂಡರ ನಡುವೆ ವಾಕಸಮರ ತುಂಬಾನೇ ಜೋರಾಗಿದ್ದು, ಇತ್ತೀಚೆಗೆ ನಮ್ಮ ನ್ಯೂಸ್ ಸಮೂಹದೊಂದಿಗೆ ಮಾಜಿ ಶಾಸಕ ಅರವಿಂದ ಪಾಟೀಲ್ ಅವರು ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್
ಅವರ ಮೂಲದ ಬಗ್ಗೆ ಹಾಗೂ ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡಿದ್ದರು. ಇದಕ್ಕೆ ಪ್ರತ್ತ್ಯುತ್ತರ ವಾಗಿ ಮೊನ್ನೆ ಖಾನಾಪುರ ಬ್ಲಾಕ್ ಅಧ್ಯಕ್ಷ ಮಹಾದೇವ ಕೋಳಿ ಹಾಗೂ ಕಾಂಗ್ರೆಸ್ ಮುಖಂಡರು ಮಾಜಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದ್ದಾರೆ.
ವರದಿ:-ಬಸವರಾಜು