Ad imageAd image

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್ 

Bharath Vaibhav
ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್ 
WhatsApp Group Join Now
Telegram Group Join Now

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿದ್ದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನೆರವೇರಿತು.

ಇಂದು ಬೆಳಿಗ್ಗೆ ರವೀಂದ್ರಕಲಾ ಕ್ಷೇತ್ರದಲ್ಲಿ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಶಿವರಾಜ್ ತಂಗಡಗಿ, ನಟರಾದ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್, ದ್ರುವ ಸರ್ಜಾ, ಜಗ್ಗೇಶ್, ಶೃತಿ, ಸುಧರಾಣಿ ಸೇರಿದಂತೆ ಚಿತ್ರರಂಗ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.

ಬಳಿಕ ಚಾಮರಾಜಪೇಟೆಯ ಚಿತಾಗಾರಕ್ಕೆ ದ್ವಾರಕೀಶ್ ಅವರ ಪಾರ್ಥಿವ ಶರೀರ ತರಲಾಯಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.

ಪ್ರೇತ ಸಂಸ್ಕಾರ ಹಿನ್ನೆಲೆಯಲ್ಲಿ ಕಿವಿಯಲ್ಲಿ ನಾರಾಯಣ ಸ್ಮರಣೆ, ಚಿತಾ ಅಗ್ನಿಹೋಮ ಸೇರಿದಂತೆ ಕೊನೇ ಹಂತದ ವಿಧಿ-ವಿಧಾನ ನೆರವೇರಿಸಲಾಯಿತು.

ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಲಾಯಿತು. ಬಳಿಕ ದ್ವಾರಕೀಶ್ ಅವರ ಹಿರಿಯ ಮಗ ಯೋಗಿ ದ್ವಾರಕೀಶ್ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಕುಟುಂಬ ಸದಸ್ಯರು, ಕನ್ನಡ ಚಿತ್ರರಂಗದ ಹಿರಿಯ ನಟ-ನಟಿಯರು, ನಿರ್ದೇಶಕರು, ನಿರ್ಮಾಪಕರು, ಗಣ್ಯರು ಹಿರಿಯ ನಟನಿಗೆ ಕಣ್ಣೀರ ವಿದಾಯ ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!