Ad imageAd image

ಕರಡಿ ಗ್ರಾಮ ಪಂಚಾಯತಿಯಲ್ಲಿ ಮತದಾನ ಜಾಗೃತಿ

Bharath Vaibhav
ಕರಡಿ ಗ್ರಾಮ ಪಂಚಾಯತಿಯಲ್ಲಿ ಮತದಾನ ಜಾಗೃತಿ
WhatsApp Group Join Now
Telegram Group Join Now

ಇಳಕಲ್ :-ತಾಲೂಕಿನ ಕರಡಿ ಗ್ರಾಮ ಪಂಚಾಯತಿಯ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬಾಗಲಕೋಟೆ ರವರು ಜನರಿಗೆ ಮತ ಚಲಾಯಿಸುವ ಬಗ್ಗೆ ತಿಳುವಳಿಕೆ ನೀಡಿದರು ಹಾಗೂ ಮತದಾನದ ಪ್ರತಿಜ್ಞಾವಿಧಿಯನ್ನು ಭೋದಿಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ನಂತರ ಬೂದಿಹಾಳ ಎಸ್ ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೊಣ್ಣೂರು ಗ್ರಾಮದ ರೈತರ ಹೊಲದಲ್ಲಿ ನಡೆದ ಬದು ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಅಲ್ಲಿನ ಕೂಲಿಕಾರರಿಗೆ ಮತ ಚಲಾಯಿಸುವ ಕುರಿತು ತಿಳುವಳಿಕೆ ನೀಡಿದರು.

ಮತ್ತು ಇಳಕಲ್ ನಗರ ಸಭೆಯ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳನ್ನು ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮಾನ್ಯ ಸಹಾಯಕ ನಿರ್ದೆಶಕರು, ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವರದಿ ದಾವಲ್. ಶೇಡಂ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!