ಬೆಳಗಾವಿ : ಬೆಳಗಾವಿ ಜಿಲ್ಲೆಯ ನ್ಯೂ ವಂಟಮೂರಿ ಗ್ರಾಮದಲ್ಲಿ ಕಳೆದ ವರ್ಷದ ಡಿಸೆಂಬರ್ 11 ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸುತ್ತು. ಇದೀಗ ಇಂತಹ ಆರೋಪಿಗಳಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.
ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣ ದೇಶವೇ ತಲೆತಗ್ಗಿಸುವಂತೆ ಮಾಡಿತ್ತು.ಇದೀಗ ಆರೋಪಿಗಳಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.
ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.
ವಂಟಮೂರಿ ಗ್ರಾಮದಲ್ಲಿ ಜೀಪ್ ನಲ್ಲಿ ಮೆರವಣಿಗೆ ಮಾಡಲು ಮುಂದಾಗಿದ್ದರು. ಆದರೆ ಪೊಲಿಸರು ಅವಕಾಶ ನೀಡದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಜೈಲಿನ ಎದುರು ಪ್ರಮುಖ ಆರೋಪಿ ಹೂಮಾಲೆ ಹಾಕಿ ಸ್ವಾಗತಿಸಿರುವ ವಿಡಿಯೋ ವೈರಲ್ ಆಗಿದೆ.