Ad imageAd image

ಏ. 28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ

Bharath Vaibhav
ಏ. 28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ
MODI
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 28, 29ರಂದು ರಾಜ್ಯಕ್ಕೆ ಮೋದಿ ಭೇಟಿ ನೀಡಲಿದ್ದಾರೆ.ಏಪ್ರಿಲ್ 28ರಂದು ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಏಪ್ರಿಲ್ 29ರಂದು ಬಳ್ಳಾರಿ, ರಾಯಚೂರು, ಕೊಪ್ಪಳಕ್ಕೆ ಮೋದಿ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿಯೂ ಮೋದಿ ಪ್ರಚಾರ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಮಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!