ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ನಾಲ್ಕು ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವತಿಯಿಂದ 17 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ವಿಜಯಪುರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಗದಗ, ಬೆಳಗಾವಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ಹಾವೇರಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಈ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮುಂದಿನ ಒಂದು ವಾರ ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದ್ದು, ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮೇ 2ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರುವ ಸಂಭವವಿದೆ.