ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಂಬಕ್ಕೆ ಕಟ್ಟಿ ಹನುಮವ್ವ ಮೆಡ್ಲೇರಿ(50) ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಚಂದ್ರಪ್ಪ, ಗಂಗಪ್ಪ, ಗುತ್ಯವ್ವ ಎಂಬುವರು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಹಿಳೆಯ ಪುತ್ರ ಮಂಜುನಾಥ ಯುವತಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.