ಬೆಂಗಳೂರು: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ. ರಾಜಕೀಯ ಇತಿಹಾಸದಲ್ಲಿಯೇ ಇದೊಂದು ದೊಡ್ಡ ಷಡ್ಯಂತ್ರವಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.
ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮಾತನಾಡಿದ ರೇವಣ್ಣ, ಯಾವುದೇ ಪುರಾವೆ ಇಲ್ಲದಿದ್ದರೂ ದುರುದ್ದೇಶದಿಂದ ನನ್ನನ್ನು ಬಂಧಿಸಲಾಗಿದೆ.
40 ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ಕೋಲಾಹಲ ಎಬ್ಬಿಸಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ಅವರನ್ನು ಸಿಐಡಿ ವಿಶೇಷ ತನಿಖಾ ತಂಡ(SIT) ಶನಿವಾರ ಸಂಜೆ ಬೆಂಗಳೂರಿನಲ್ಲಿ ಬಂಧಿಸಿತ್ತು.