Ad imageAd image

ಎಸ್ ಐಟಿ ಎದುರು ಅತ್ಯಾಚಾರ ಹೇಳಿಕೆ ದಾಖಲಿಸಿದ ಮತೋರ್ವ ಸಂತ್ರಸ್ತೆ

Bharath Vaibhav
ಎಸ್ ಐಟಿ ಎದುರು ಅತ್ಯಾಚಾರ ಹೇಳಿಕೆ ದಾಖಲಿಸಿದ ಮತೋರ್ವ ಸಂತ್ರಸ್ತೆ
PENDRIVE
WhatsApp Group Join Now
Telegram Group Join Now

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಇದೀಗ ಮತ್ತೋರ್ವ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ.

ಎಸ್ ಐಟಿ ಅಧಿಕಾರಿಗಳ ಬಳಿ ಹೇಳಿಕೆ ದಾಖಲಿಸಿರುವ ಸಂತ್ರಸ್ತ ಮಹಿಳೆ, ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾರೆ.

ಹೊಳೆನರಸಿಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಪ್ರಜ್ವಲ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಸಂತ್ರಸ್ತೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಲು ಕೃತ್ಯ ನಡೆದ ಸ್ಥಳದಲ್ಲಿ ಸಂತ್ರಸ್ತೆಯನ್ನು ಕರೆತರುವ ಸಾಧ್ಯತೆ ಇದೆ.

ಪ್ರಕರಣದ ತನಿಖೆ ನಡೆಸುತ್ತಿರುವ ತಂಡದ ಮುಂದೆ ಶರಣಾಗಲು ಪ್ರಜ್ವಲ್ ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಕರ್ನಾಟಕ ಪೊಲೀಸರ ಎಸ್‌ಐಟಿ ವರದಿಗಳು ತಿಳಿಸಿವೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!