ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಪ್ರಕರಣ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.
ಬಳಿಕ ಎಸ್‌ಐಟಿಯಿಂದ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಇಂದಿನವರೆಗೆ ತಮ್ಮ ವಶಕ್ಕೆ ಎಸ್‌ಐಟಿ ಅಧಿಕಾರಿಗಳು ಪಡೆದಿದ್ದರು. ಈಗ ಅವರಿಗೆ ಕೋರ್ಟ್ ಮೇ.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಜೈಲು ಪಾಲಾಗಿದ್ದಾರೆ.
ಹಾಸನ ಪೆನ್ ಡ್ರೈವ್ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂಬುದಾಗಿ ಅವರ ಪುತ್ರ ಹೊಳೇನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್, ಹೆಚ್.ಡಿ ರೇವಣ್ಣ ಅವರಿಗೆ ಬಿಗ್ ಶಾಕ್ ಎನ್ನುವಂತೆ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸದಲ್ಲಿ ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಅವರನ್ನು ಹೆಚ್ಚಿನ ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳು ಮೇ.8ರ ಇಂದಿನವರೆಗೆ ತಮ್ಮ ವಶಕ್ಕೆ ಪಡೆದಿದ್ದರು.
ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಹಾಜರು ಪಡಿಸಿದ್ದರು.
ಅಲ್ಲದೇ ಹೆಚ್.ಡಿ ರೇವಣ್ಣ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೂ ನೀಡುವಂತೆ ಮನವಿ ಮಾಡಿದರು. ಜೊತೆಗೆ ಯಾವುದೇ ಮಾಹಿತಿ ನೀಡಿಲ್ಲ. ವಿಚಾರಣೆಗೂ ಸರಿಯಾಗಿ ಸಹಕರಿಸಿಲ್ಲ. ಇನ್ನೂ ಕೆಲ ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಈಗ ಮೇ.14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಜೈಲುಪಾಲಾದಂತೆ ಆಗಿದೆ.