ನಿಡಗುಂದಿ: ಪಟ್ಟಣದ ಬಿಎಂಎಸ್ ಹೈಸ್ಕೂಲ್ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ್ದಾರೆ. ಶಾಲೆಗೆ ಸತತವಾಗಿ ಹತ್ತು ವರ್ಷಗಳಿಂದ ಉತ್ತಮ ಫಲಿತಾಂಶ ದೊರೆಯುತ್ತಿದ್ದು ಈ ವರ್ಷವೂ ಕೂಡ ದಾಖಲೆ ಫಲಿತಾಂಶ ದೊರೆತಿದೆ.
ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಪ್ರಜ್ವಲ್ ಡೆಂಗಿ ಒಟ್ಟು 625 ಕ್ಕೆ 595 (95.20%) ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸುಕನ್ಯಾ ಜಂಡೇದ 585 (93.60%) ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಧುಮಿತಾ ಧರ್ಮರ 583 (93.28%)ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದು ಮೇಲುಗೈ ಸಾಧಿಸಿದ್ದಾರೆ.
ಒಟ್ಟು 60 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರೆ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 08 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಿಳಾ ವಿದ್ಯಾವರ್ಧಕ ಸಂಘದ ಸಂಸ್ಥಾಪಕರಾದ ಶರಣಪ್ಪ ನಾಗರಬೆಟ್ಟ, ಅಧ್ಯಕ್ಷರಾದ ವಿಜಯಾ ನಾಗರಬೆಟ್ಟ, ಪ್ರೌಢ ಶಾಲೆಯ ಮುಖ್ಯಗುರುಗಳಾದ ಸೋಮಶೇಖರ್ ನಾಗರಬೆಟ್ಟ, ಪ್ರಾಥಮಿಕ ವಿಭಾಗದ ಮುಖ್ಯ ಗುರುಮಾತೆಯರಾದ ಸೀಮಾ ನಾಗರಬೆಟ್ಟ ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.