ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ.
ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಅಂತ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ನೀಡಿರುವಂತ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕದಲ್ಲೂ ಆಪರೇಷನ್ ನಡೆಯುವ ಸುಳಿವನ್ನು ಮಹಾ ಸಿಎಂ ಏಕನಾಥ ಶಿಂಧೆ ನೀಡಿದ್ದಾರೆ. ಸತಾರದಲ್ಲಿ ಮಾತನಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲೂ ನಾಥ ಆಪರೇಷನ್ ಮಾಡೋದಿದೆ ಎಂಬುದಾಗಿ ಅಲ್ಲಿನ ನಾಯಕರು ಹೇಳಿದ್ದಾರೆ. ನಮ್ಮ ಅವಶ್ಯಕತೆ ಇದೆ ಅಂತೂನ ಹೇಳಿದ್ದಾರೆ. ನಾನು ಲೋಕಸಭಾ ಚುನಾವಣೆ ಮುಗಿದ ಮೇಲೆ ಕರ್ನಾಟಕಕ್ಕೆ ಮತ್ತೆ ಬರುತ್ತೇನೆ ಎಂದು ಹೇಳಿದ್ದೇನು ಎಂದಿದ್ದಾರೆ.