Ad imageAd image

ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ : ಶಾಸಕ ಪ್ರೀತಂ ಗೌಡ ಆಪ್ತರ ಜಾಮೀನು ಅರ್ಜಿ ವಜಾ

Bharath Vaibhav
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ : ಶಾಸಕ ಪ್ರೀತಂ ಗೌಡ ಆಪ್ತರ ಜಾಮೀನು ಅರ್ಜಿ ವಜಾ
WhatsApp Group Join Now
Telegram Group Join Now

ಹಾಸನ: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್​ ಹಾಗೂ ಲಿಖಿತ್​ ಗೌಡ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ವಿಶೇಷ ತನಿಖಾ ದಳ (SIT) ಮೇ 12ರಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್​ ಹಾಗೂ ಲಿಖಿತ್​ ಗೌಡನನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಇಬ್ಬರು ಕೂಡ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!