ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮಳೆಗಾಲದ ನಂತರ ನಡೆಯುವ ಸಾಧ್ಯತೆ ಇದೆ.ಚುನಾವಣೆಗೆ ಇದ್ದ ಕಾನೂನು ಅಡ್ಡಿ ನಿವಾರಣೆಗೆ ಸರ್ಕಾರ ಚಿಂತನೆ ನಡೆಸಿದೆ.
ಜಿಪಂ, ತಾಪಂ ಚುನಾವಣೆ ನಡೆಸಲು ಅಡ್ಡಿಯಾಗಿರುವ ಕಾನೂನು ಅಡೆ-ತಡೆ ನಿವಾರಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲಾ, ತಾಲೂಕು ಗಡಿ, ಮೀಸಲಾತಿ ಮೊದಲಾದವುಗಳ ಬಗ್ಗೆ ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಆಹ್ವಾನಿಸಿ, ಆಕ್ಷೇಪಣೆ ಪರಿಶೀಲಿಸಿ ಅಂತಿಮ ಪಟ್ಟಿ ಪ್ರಕಟಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪಂಚಾಯ್ತಿ ಚುನಾವಣೆಗೆ ಸಜ್ಜಾಗುವಂತೆ ಕರೆ ನೀಡಿದ್ದಾರೆ. ಮುಂಬರುವ ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯತ್ತ ಕಾರ್ಯಕರ್ತರು, ಮುಖಂಡರು ಗಮನಹರಿಸಬೇಕು. ಪಕ್ಷ ಸಂಘಟಿಸಿ ಸಿದ್ದರಾಗಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಪಂಚಾಯಿತಿಗಳ ಗಡಿ ಮರು ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ.