ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇಡಲು ಸರ್ಕಾರ ಮುಂದಾಗಿದೆ ಜಾತಿ ಗಣತಿಗೆ ಸಂಪುಟ ಉಪ ಸಮಿತಿ ರಚಿಸಲು ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಸಾಮಾಜಿಕ, ಶೈಕ್ಷಣಿಕ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.
ಸಂಪುಟ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಹೇಳಿದ್ದು, ಚುನಾವಣೆ ನೀತಿ ಸಂಹಿತೆ ಮುಕ್ತಾಯದ ಬಳಿಕ ಜಾತಿ ಗಣತಿ ವಿಚಾರ ವರದಿ ಅನುಷ್ಠಾನಕ್ಕೆ ಚಿಂತನೆ ನಡೆದಿದೆ ಎನ್ನಲಾಗಿದೆ.
ಜಾತಿ ಗಣತಿ ವರದಿ ಪರಾಮರ್ಶೆ ಸಂಬಂಧ ಸಂಪುಟ ಉಪ ಸಮಿತಿ ರಚಿಸುವುದು ಸರ್ಕಾರ ಉದ್ದೇಶವಾಗಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅನುಕೂಲದ ದೃಷ್ಟಿಯಿಂದ ಜಾತಿಗಣತಿ ಲಾಭ ಪಡೆಯಲು ಸರ್ಕಾರ ಯೋಜಿಸುವ ಸಾಧ್ಯತೆ ಇದೆ.
ಪ್ರಬಲ ಸಮುದಾಯಗಳು ಮತ್ತೆ ವಿರೋಧ ವ್ಯಕ್ತಪಡಿಸಿದರೆ ಇಕ್ಕಟ್ಟು ಎದುರಾಗಲಿದೆ. ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ ವರದಿಯನ್ನು ಸಂಪುಟ ಉಪ ಸಮಿತಿ ಅಧ್ಯಯನ ಮಾಡಿ ಬಳಿಕ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.