ಮೈಸೂರು : ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ಅಪ್ಪ -ಅಮ್ಮ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರನ್ನು ಕುಮಾರಸ್ವಾಮಿ (45) ಮಂಜುಳಾ ಹಾಗೂ ಮಕ್ಕಳಾದ ಅರ್ಚನಾ ಸ್ವಾತಿ ಎಂದು ಗುರುತಿಸಲಾಗಿದೆ. ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಅಥವಾ ಮನೆಯಲ್ಲಿ ಯಾವುದಾದರೂ ಅವಘಡ ಸಂಭವಿಸಿದ್ಯಾ ಎಂಬುದು ತಿಳಿದು ಬರಬೇಕಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.