ಬೆಂಗಳೂರು ; ರಾಜ್ಯದಲ್ಲಿರುವ ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಶಿಕ್ಷಣ ಇಲಾಖೆ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವ ಅಥವಾ ದಾಖಲಿಸಿರುವ ಶಾಲೆಗಳು ಅಧಿಕೃತವೇ, ಅನಧಿಕೃತವೇ ಎಂದು ಪರಿಶೀಲಿಸಿಕೊಳ್ಳಬಹುದು.
ಇನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ತಯಾರಿಸಿದ್ದು, ಸುಮಾರು ೧,೬೦೦ ಅನಧಿಕೃತ ಶಾಲೆಗಳನ್ನು ಪತ್ತೆ ಹಚ್ಚಿತ್ತು. ಆದರೆ ಅವುಗಳ ಸಣ್ಣಪುಟ್ಟ ಲೋಪಗಳಿದ್ದಲ್ಲಿ ಸರಿಪಡಿಸಿಕೊಳ್ಳು ಅವಕಾಶ ನೀಡಿತ್ತು.