Ad imageAd image

ರಾಮಮಂದಿರ ಆವರಣದಲ್ಲಿ ಮೊಬೈಲ್ ಸಂಪೂರ್ಣ ನಿಷೇಧ

Bharath Vaibhav
ರಾಮಮಂದಿರ ಆವರಣದಲ್ಲಿ ಮೊಬೈಲ್ ಸಂಪೂರ್ಣ ನಿಷೇಧ
WhatsApp Group Join Now
Telegram Group Join Now

ಅಯೋಧ್ಯೆ :  ರಾಮ ಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.ರಾಮ ಮಂದಿರ ಟ್ರಸ್ಟ್ ನ ಪದಾಧಿಕಾರಿಗಳು, ಐಜಿ ಹಾಗೂ ಕಮಿಷ್ನರ್ ಗಳ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ ಅಯೋಧ್ಯೆ ರಾಮ ಮಂದಿರ ಆವರಣದಲ್ಲಿ ಮೊಬೈಲ್ ಫೋನ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ದೇವಸ್ಥಾನದಲ್ಲಿ ಸಾರ್ವಜನಿಕರು, ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು. ಇದೀಗ ವಿಐಪಿಗಳು, ವಿವಿಐಪಿಗಳು ಕೂಡ ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟಿ ಅನಿಲ್ ಮಿಶ್ರಾ ತಿಳಿಸಿದ್ದಾರೆ. ಎಲ್ಲಾ ಸಂದರ್ಶಕರು ಈ ವ್ಯವಸ್ಥೆಯನ್ನು ಅನುಸರಿಸಬೇಕು. ಹಾಗೂ ಯಾವುದೇ ಅನಾನುಕೂಲತೆಯುಂಟಾಗದಂತೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!