Ad imageAd image

ಈ ವರ್ಷವೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ 

Bharath Vaibhav
ಈ ವರ್ಷವೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಲ್ಲಾ ಶಾಲೆಗಳು ಪುನರಾರಂಭವಾಗುತ್ತಿದ್ದು, ಈ ವರ್ಷವೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಿಸಿದೆ.

2024-25ರ ಶೈಕ್ಷಣಿಕ ವರ್ಷದಲ್ಲಿಯೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಇರಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ದೃಢಪಡಿಸಿದೆ.

2023-24ರ ಸಾಲಿನಲ್ಲಿ ಈ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿ ಅದು ಕಾನೂನಿನ ಬಿಕ್ಕಟ್ಟಿಗೆ ಸಿಲುಕಿಕೊಂಡು ಸದ್ಯ ಫಲಿತಾಂಶ ಪ್ರಕಟಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪ್ರಕರಣ ನ್ಯಾಯಾಲಯದಲ್ಲಿ ದ್ದರೂ ಸಹ ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಬಗ್ಗೆ ಶೈಕ್ಷಣಿಕ ಮಾರ್ಗದರ್ಶಿ-2024-25ರಲ್ಲಿ ಉಲ್ಲೇಖಿಸಿದ್ದು, ಸೆಪ್ಟೆಂಬರ್‌ನಲ್ಲಿ ಮೌಲ್ಯಾಂ ಕನ-1 ಮತ್ತು ಮಾರ್ಚ್‌ನಲ್ಲಿ ಮೌಲ್ಯಾಂಕನ -2 ಮಾಡಿ ಏಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!