Ad imageAd image

BREAKING NEWS : ತಡರಾತ್ರಿ ಪ್ರಜ್ವಲ್ ರೇವಣ್ಣ ಅರೆಸ್ಟ್ 

Bharath Vaibhav
BREAKING NEWS : ತಡರಾತ್ರಿ ಪ್ರಜ್ವಲ್ ರೇವಣ್ಣ ಅರೆಸ್ಟ್ 
prajwal revanna
WhatsApp Group Join Now
Telegram Group Join Now

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ.

ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ.

ಅವರನ್ನು ವಶಕ್ಕೆ ಪಡೆದುಕೊಂಡ ಎಸ್‌ಐಟಿ ವಿಮಾನ ನಿಲ್ದಾಣದಿಂದ ಎಸ್‌ಐಟಿ ಕಚೇರಿಗೆ ಕರೆತಂದಿದೆ. ಚಾಲುಕ್ಯ ಸರ್ಕಲ್ ಎಸ್‌ಐಟಿ ಕಚೇರಿ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇಂದು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗೆ ಕಸ್ಟಡಿಗೆ ಪಡೆಯಲು ಎಸ್‌ಐಟಿ ಮುಂದಾಗಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!