Ad imageAd image

ನಾಳೆಯಿಂದ 6 ದಿನ ಮದ್ಯ ಅಂಗಡಿಗಳು ಬಂದ್..??

Bharath Vaibhav
ನಾಳೆಯಿಂದ 6 ದಿನ ಮದ್ಯ ಅಂಗಡಿಗಳು ಬಂದ್..??
WhatsApp Group Join Now
Telegram Group Join Now

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದು, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ.

ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.

ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೊರಡಿಸಲಾಗಿದೆ.ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಇರುವುದಿಲ್ಲ.

ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ.

ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಜೂನ್‌ ಮೊದಲ ವಾರ ಪೂರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಅನುಮಾನವಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!