ಭೋಪಾಲ್: ಮಧ್ಯಪ್ರದೇಶದ ರಾಜ್ ಗಢ ಜಿಲ್ಲೆಯಲ್ಲಿ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ.
ರಾಜ್ ಗಢ ಜಿಲ್ಲೆಯ ಪಿಪ್ಲೋಧಿಜಾದ್ ನಲ್ಲಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, 13 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ರಾಜಸ್ಥಾನದ ನಿವಾಸಿಗಳು ಎಂದು ಹೇಳಲಾಗಿದೆ. ರಾಜಸ್ಥಾನದಿಂದ ರಾಜ್ಗಢ ಜಿಲ್ಲೆಯ ಕುಲಂಪುರ ಗ್ರಾಮಕ್ಕೆ ಮದುವೆ ಮೆರವಣಿಗೆಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಪಿಪ್ಲೋಡಿ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ನಂತರ, ಗಾಯಗೊಂಡವರನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಮಧ್ಯಪ್ರದೇಶದ ರಾಜ್ ಗಢ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸುದ್ದಿ ಕೇಳಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.