ಖ್ಯಾತ ಬಹು ಭಾಷಾ ನಟಿ ರಂಭಾ ಇಂದು 48ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ.
1992ರಲ್ಲಿ ತೆರೆ ಕಂಡ ಸರ್ಗಮ್ ಎಂಬ ಮಲಯಾಳಂ ಚಿತ್ರದ ಮೂಲಕ ನಟಿ ರಂಭಾ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ರಂಭಾ ಅದೇ ವರ್ಷದಲ್ಲಿ ತೆಲುಗಿನ ‘ಆ ಒಕ್ಕಟಿ ಅದಕ್ಕು’ನಲ್ಲಿ ತೆರೆ ಹಂಚಿಕೊಂಡರು.
ಬಳಿಕ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ಇವರು 1993ರಲ್ಲಿ ನವರಸ ನಾಯಕ ಜಗ್ಗೇಶ್ ಜೊತೆ ‘ಸರ್ವರ್ ಸೋಮಣ್ಣ’ ಸಿನಿಮಾದಲ್ಲಿ ಅಭಿನಯಿಸಿದರು.
ನಟಿ ರಂಭಾ ಕನ್ನಡ ಸೇರಿದಂತೆ ಸುಮಾರು 8 ಭಾಷೆಗಳಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ಇತ್ತೀಚಿಗೆ ಚಿತ್ರರಂಗದಿಂದ ದೂರ ಉಳಿದಿರುವ ಇವರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.



		
		
		
