ನವದೆಹಲಿ: ಕ್ಯಾಬಿನೆಟ್ ತನ್ನ ಇಂದಿನ ಸಭೆಯಲ್ಲಿ, 17 ನೇ ಲೋಕಸಭೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸುವಂತೆ ರಾಷ್ಟ್ರಪತಿಗಳಿಗೆ ಸಲಹೆ ನೀಡಿದೆ. ರಾಷ್ಟ್ರಪತಿಗಳು ಸಂಪುಟದ ಸಲಹೆಯನ್ನು ಸ್ವೀಕರಿಸಿದ್ದಾರೆ.
17 ನೇ ಲೋಕಸಭೆಯನ್ನು ವಿಸರ್ಜಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ.ಈ ಮೂಲಕ 17ನೇ ಲೋಕಸಭೆ ವಿಸರ್ಜನೆಯೊಂದಿಗೆ ಕೇಂದ್ರ ಸಚಿವ ಸಂಪುಟ ವಿಸರ್ಜನೆಯಾದಂತೆ ಆಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಮೋದಿ: 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿದೆ.
ಆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಿದರು. ಜೊತೆಗೆ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆಯನ್ನು ಮೋದಿ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ.