ಯಳಂದೂರು:-ಪಟ್ಟಣದ ವಾಲ್ಮೀಕಿ ವೃತ್ತದ ಬಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಮೂರನೇ ಬಾರಿಗೆ ನರೇಂದ್ರ ಮೋದಿ ರವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.ಅಭಿಮಾನಿಗಳು ಬಿಜೆಪಿ ಹಾಗೂ ಮೋದಿ ರವರಿಗೆ ಜೈ ಕಾರಾ ಆಕಿ, ಮತ್ತೊಮ್ಮೆ ಮೋದಿ ಎಂದು ಘೋಷಣೆ ಕೂಗುತ್ತಾ ಸಂಭ್ರಮ ವ್ಯಕ್ತಪಡಿಸಿದರು.
ನಂತರ ಯಳಂದೂರು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿಲ್ ರವರು ಮಾತನಾಡಿ ದೇಶದ ಇತಿಹಾಸದಲ್ಲಿ ಇಂದು ಐತಿಹಾಸಿಕ ಕ್ಷಣ. ಸತತ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಎನ್‌ಡಿಎ ನಾಯಕರಾಗಿ ಭಾರತವನ್ನು ವಿಕಸಿತ ರಾಷ್ಟ್ರವಾಗಿಸುವತ್ತ ಕೊಂಡೊಯ್ಯಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮುಖಂಡರು, ಕಾರ್ಯಕರ್ತರು, ತಾಲೂಕು ವ್ಯಾಪ್ತಿಯ ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ :ಸ್ವಾಮಿ ಬಳೇಪೇಟೆ