ತುಮಕೂರು : ಪೋಕ್ಸೋ ಪ್ರಕರಣ ಸಂಬಂಧ ಅಗತ್ಯ ಬಿದ್ರೆ ಸಿಐಡಿಯವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಿ.ಎಸ್. ಯಡಿಯೂರಪ್ಪಗೆ ನೋಟಿಸ್ ನೀಡಿದ್ದು, ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ .ಯಡಿಯೂರಪ್ಪ ನವರಿಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲು ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ವಾರಂಟ್ ಹೊರಡಿಸುವ ಬಗ್ಗೆ ಕೋರ್ಟ್ ಆದೇಶ ಹೊರಡಿಸುವ ಸಾಧ್ಯತೆ ಇದೆ.