Ad imageAd image

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ 

Bharath Vaibhav
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ 
bsy
WhatsApp Group Join Now
Telegram Group Join Now

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು.

ಆದರೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ನಂತರ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೂ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಕೂಡ ಅವರು ಅರ್ಜಿ ಸಲ್ಲಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!