Ad imageAd image

ಪರಿಶಿಷ್ಟ ಪಂಗಡದರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ 

Bharath Vaibhav
ಪರಿಶಿಷ್ಟ ಪಂಗಡದರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ 
vidhana soudha
WhatsApp Group Join Now
Telegram Group Join Now

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಸಂಬಂಧಪಟ್ಟ ತಾಲ್ಲೂಕುಗಳ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಟ್ಯಾಬ್ ವಿತರಣೆ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ನಿಗಧಿತ ಗುರಿಗಳಿಗೆ ತಕ್ಕಷ್ಟು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳು ಬಾರದಿರುವುದರಿಂದ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆ ಫಲಾಪೇಕ್ಷಿಯು 1 ಎಕರೆಯಿಂದ 5 ಎಕರೆ ವ್ಯವಸಾಯದ ಜಮೀನು ಹೊಂದಿದ್ದು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದುಕೊಂಡಿರಬಾರದು. ಅಂತವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಪಂಪ್ ಮೋಟಾರ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 13 ಕೊಳವೆ ಬಾವಿಗಳು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 10 ಕೊಳವೆ ಬಾವಿಗಳು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ ಕ್ಷೇತ್ರದಲ್ಲಿ 1 ಕೊಳವೆ ಬಾವಿ.

ಮೈಕ್ರೋ ಕ್ರೆಡಿಟ್ ಯೋಜನೆಯಡಿ ನೋಂದಾಯಿತ ಮಹಿಳಾ ಸ್ವ ಸಹಾಯ ಸಂಘಗಳಿಗೆ (10 ಸದಸ್ಯರ ಸಂಘ) ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿರಾಜಪೇಟೆ 1 ಸಂಘ (10 ಸದಸ್ಯರ ಸಂಘ).

ಉದ್ಯಮಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲ ಪಡೆದುಕೊಳ್ಳಬೇಕು. ವಿರಾಜಪೇಟೆಯಲ್ಲಿ 2 ಗುರಿಯನ್ನು ಹೊಂದಿದೆ.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಟ್ಯಾಬ್ ವಿತರಣೆ ಯೋಜನೆ: ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತರ ಮಕ್ಕಳು 8ನೇ ತರಗತಿಯಿಂದ ಪಿಯುಸಿ, ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್, ಬಿಎ, ಬಿಎಸ್ಸಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವರಿಗೆ ಆನ್‍ಲೈನ್ ಪಾಠ ಕೇಳಲು ಅನುಕೂಲವಾಗುವಂತೆ ಪ್ರತಿ ವಿದ್ಯಾರ್ಥಿಗಳಿಗೆ ಒಂದು ಟ್ಯಾಬ್ ಉಚಿತವಾಗಿ ವಿತರಿಸಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ. 08272-228857 ನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜೂನ್, 29 ಕೊನೆಯ ದಿನವಾಗಿದೆ. ಅರ್ಜಿ ಈ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಪ್ಪ ಅವರು ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!