ಬೆಂಗಳೂರು : ಬೆಂಗಳೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಸೈಕಲ್ ಜಾಥಾ ಹಮ್ಮಿಕೊಂಡಿದ್ದರು.ಈ ವೇಳೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ನಡೆಯುತ್ತಿದ್ದಂತಹ ಸೈಕಲ್ ಜಾಥಾದಲ್ಲಿ ಬಿಜೆಪಿ ನಾಯಕರಾದ ಸಿ.ಟಿ ರವಿ, ಶಾಸಕ ಡಾ ಅಶ್ವಥ್ ನಾರಾಯಣ್ , ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.