ಬೆಂಗಳೂರು: ಕೃಷಿ ಇಲಾಖೆಯಲ್ಲಿ 600 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ ಖಾಲಿ ಉಳಿದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ 600ಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಶೀಘ್ರ ಭರ್ತಿ ಮಾಡಲಾಗುವುದು’ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದಾರೆ.