Ad imageAd image

ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

Bharath Vaibhav
ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಕರಾವಳಿ ದಕ್ಷಿಣ ಒಳನಾಡಿನ ಅನೇಕ ಕಡೆ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 24ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಹಾಸನ, ಕೊಡಗು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂ. 25ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!