ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿಗೆ ರಾಜ್ಯ ಸರ್ಕಾರ ವಹಿಸಿದೆ.
ಈ ನಡುವೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಸೂರಜ್ ಅವರನ್ನು ಇಂದು ರಾತ್ರಿ ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯಗಳ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಇದೇ ವೇಳೇ ನ್ಯಾಯಾಧೀಶರು ಸೂರಜ್ ರನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಅವರನ್ನು ಬಂಧಿಸಿದೆ ಅಂತ ತಿಳಿದು ಬಂದಿದೆ