ಅಯೋಧ್ಯೆ: ಜ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾದ ನಂತರದಲ್ಲಿ ಸುರಿದ ಮೊದಲ ಭಾರಿ ಮಳೆಯ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ನೀರು ಸೋರುತ್ತಿದೆ.
ಮಂದಿರದ ನಿರ್ಮಾಣದ ವೇಳೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಶನಿವಾರ ಮಧ್ಯರಾತ್ರಿ ಮಳೆ ಸುರಿಯಿತು, ಮಂದಿರದ ಆವರಣದಲ್ಲಿ ಬಿದ್ದ ಮಳೆನೀರು ಹರಿದುಹೋಗಲು ಸೂಕ್ತವಾದ ವ್ಯವಸ್ಥೆ ಇರಲಿಲ್ಲ, ಮಂದಿರದ ಆಡಳಿತದ ಹೊಣೆ ಹೊತ್ತಿರುವವರು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮೇಲ್ಛಾವಣಿಯಿಂದ ನೀರು ಸೋರುತ್ತಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಾಗ, ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಮಂದಿರಕ್ಕೆ ಬಂದು ಮೇಲ್ಛಾವಣಿಯ ರಿಪೇರಿಗೆ ಸೂಚನೆ ನೀಡಿದರು ಎಂದು ಮೂಲಗಳು ಹೇಳಿವೆ.