ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಹಾಗೂ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕ ಸದಸ್ಯ ಪೀಠದಲ್ಲಿ ನಡೆದಿದೆ.
ಪ್ರಕರಣದ ಸಂಬಂಧ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬೇಕಿದ್ದು, ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದ್ದು, ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.