ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮತ್ತೆ 10 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ಬಾರ್, ಹೊಟೇಲ್, ಚಿನ್ನದ ಅಂಗಡಿಯವರ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.193 ಬ್ಯಾಂಕ್ ಖಾತೆಗಳಿಂದ ಇದೀಗ 10 ಕೋಟಿ ನಗದು ಹಣ ಜಪ್ತಿ ಮಾಡಲಾಗಿದೆ.
ಆರೋಪಿಗಳು ಬಾರ್, ಚಿನ್ನದ ಅಂಗಡಿಗಳ ಖಾತೆಗೆ ಹಣ ಹಾಕಿ ಬಳಿಕ ಡ್ರಾ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧ ಈವರೆಗೆ ಒಟ್ಟು 28 ಕೋಟಿ ನಗದು ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅಕ್ರಮ ನಡೆದಿದ್ದು, ತನಿಖೆಗಾಗಿ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದೆ. ಈ ನಿಟ್ಟಿನಲ್ಲಿ ಎಸ್ ಐಟಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.