ಬೆಂಗಳೂರು :-ಕೇಂದ್ರ ಸರ್ಕಾರ ಸಹಭಾಗಿತ್ವದ ಇಲಾಖಾ ಯೋಜನೆಗಳ ಅನುಮೋದನಾ ಮಂಡಳಿಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ದಕ್ಷಿಣ ಭಾರತದ ರಾಜ್ಯಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳ ಮಂಡಳಿ ಸಭೆಯ ಮುನ್ನ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು.ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವಾಲಯದ ಕಾರ್ಯದರ್ಶಿ ಅನಿಲ್ ಮಲ್ಲಿಕ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು, ಕೇಂದ್ರ ಸರ್ಕಾರದ ಸಹಭಾಗಿತ್ವದ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಘೋಷಣೆಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳು, ಅನುದಾನದ ಮೊತ್ತ, ಕಾರ್ಯಕ್ರಮಗಳ ಅನುಮೋದನೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.ಪ್ರಮುಖವಾಗಿ ಪೋಷಣ್ ಅಭಿಯಾನ್, ಮಿಷನ್ ಶಕ್ತಿ, ವಾತ್ಸಲ್ಯ ಸೇರಿದಂತೆ ರಾಜ್ಯದಲ್ಲಿ ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತಂತೆ ಚರ್ಚಿಸಲಾಯಿತು.ಈ ವೇಳೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಜಿ.ಎಸ್.ಪ್ರಕಾಶ್, ಇಲಾಖಾ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಎಂ. ಆರ್. ರವಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಮತ್ತಿತರರು ಅಧಿಕಾರಿಗಳು ಹಾಜರಿದ್ದರು.
ವರದಿ:- ಪ್ರತೀಕ ಚಿಟಗಿ