Ad imageAd image

ಮಹಾರಾಷ್ಟ್ರ, ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ : ಬೆಳಗಾವಿ ಜಿಲ್ಲೆಯ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿಷೇಧ

Bharath Vaibhav
ಮಹಾರಾಷ್ಟ್ರ, ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ : ಬೆಳಗಾವಿ ಜಿಲ್ಲೆಯ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿಷೇಧ
WhatsApp Group Join Now
Telegram Group Join Now

ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟಗಳಲ್ಲಿ ವರುಣಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ಕಾಡಂಚಿನ ಜಲಪಾತಗಳ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧಿಸಿವೆ.ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಳೆಯಿಂದಾಗಿ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ರುದ್ರ ರಮಣೀಯ ದೃಶ್ಯ ನೋಡಲೆಂದು ವೀಕೆಂಡ್ ಹಿನ್ನೆಲೆಯಲ್ಲಿ ಪ್ರವಾಸಿಗರು ಇಲ್ಲಿನ ಜಲಪಾತಗಳಿಗೆ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ 7 ಫಾಲ್ಸ್ ಗಳಿಗೆ ನಿರ್ಬಂಧ ವಿಧಿಸಿದೆ.

ಬಟಾವಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್ ಸೇರಿದಂತೆ 7 ಜಲಪಾತಗಳ ವೀಕ್ಷಣೆಗೆ ನಿರ್ಬಂಧಿಸಲಾಗಿದ್ದು, ಗಸ್ತು ಕಾರ್ಯಕ್ಕಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!