ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ಮುಳುಗಡೆಯಾಗಿವೆ.
ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ಸುತ್ತಮುತ್ತಲಿನ ಗ್ರಾಮಗಳು ಮುಳುಗಡೆಯಾಗಿವೆ.ಈ ಬಗ್ಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕಂಬಿಯ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದ್ದು, ಸದ್ಯದ ವಸ್ತು ಸ್ಥಿತಿ, ನೀರಿನ ಹರಿವು ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.