ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೆಮ್ಮದಿಯ ಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಕೆಎಸ್ ಆರ್ ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳ ಪ್ರಯಾಣ ದರವನ್ನು 2020 ರಲ್ಲಿ ಹೆಚ್ಚಿಸಲಾಗಿದೆ.
ಬಿಎಂಟಿಸಿ ಪ್ರಯಾಣ ದರವನ್ನು2014 ರ ಬಳಿಕ ಜಾಸ್ತಿ ಮಾಡಿಲ್ಲ. ಡೀಸೆಲ್ ಬೆಲೆ, ಸಿಬ್ಬಂದಿ ವೇತನ, ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ. ಆದರೆ ಪ್ರಯಾಣ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಶೀಘ್ರವೇ ಹಂತ ಹಂತವಾಗಿ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.